ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎನ್.ವಿ ಅಂಜಾರಿಯ, ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದು, ಅಲ್ಲದೇ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದರು.
ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಆರಂಭವಾದ ವೇಳೆ ಮೇಲ್ಮನವಿಯಲ್ಲಿ ನೋಟಿಸ್ ಇನ್ನೂ ಜಾರಿಯಲಿಲ್ಲ. ಮೊದಲು ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ ವಾದಿಸುತ್ತಿದ್ದು, ಏಕ ಸದಸ್ಯ ಪೀಠದ ಆದೇಶದಲ್ಲಿನ ಲೋಕವನ್ನು ತೋರಿಸುತ್ತೇನೆ 17ಎ ನಿಯಮವನ್ನು ಸಂಪೂರ್ಣವಾಗಿ ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ಪೊಲೀಸ್ ಅಧಿಕಾರಿ ಮೂಲಕವೇ ಅನುಮತಿ ಕೋರಬೇಕು. ಆದರೆ ಹೈಕೋರ್ಟ್ ಏಕ ಸದಸ್ಯ ಪೀಠ ಇದನ್ನು ನಿರ್ಲಕ್ಷಿಸಿದೆ. ಸಿಎಂ ಸಿದ್ದರಾಮಯ್ಯ ಅಪ್ಪರ ಹಿರಿಯ ಅಖಿಲ ಅಭಿಷೇಕ್ ಮನು ಸಿಂಗ್ವಿ ವಾದಿಸಿದರು.
ರಾಜ್ಯಪಾಲರು ಕ್ಯಾಬಿನೆಟ್ ನ ಸಲಹೆ ಸೂಚನೆ ಪಾಲಿಸಬೇಕು. ಈ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಸ್ಪಷ್ಟವಾಗಿದೆ. ಅಲ್ಲದೇ ಸಿಬಿಐ ತನಿಖೆ ಕೋರಿರುವ ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಏಕ ಸದಸ್ಯ ಪೀಠದಲ್ಲಿರುವ ಡಿಸೆಂಬರ್ 10ರ ವಿಚಾರಣೆ ಮುಂದೂಡಲು ಅಭಿಷೇಕ್ ಮನುಸಿಂಗ್ವಿ ಮನವಿ ಮಾಡಿಕೊಂಡರು.
ಈ ವೇಳೆ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಮನವಿ ಮಾಡಿ, ಮುಖ್ಯಮಂತ್ರಿಯನ್ನು ರಾಜ್ಯಪಾಲರು ಆಯ್ಕೆ ಮಾಡಿಲ್ಲ. ಹೀಗಾಗಿ ರಾಜ್ಯಪಾಲರಿಗೆ ತನಿಖೆಗೆ ಅನುಮತಿ ನೀಡುವ ಅಧಿಕಾರವಿಲ್ಲ. ಸಾಂವಿಧಾನಿಕ ಪ್ರಶ್ನೆಗಳಿಗೆ ಹೈಕೋರ್ಟ್ ಉತ್ತರಿಸಬೇಕಿದೆ. ಅನುಮತಿ ನೀಡಬೇಕು ಅಂತ ಇದ್ದರೆ ಏನಾದರೂ ಬಾಕಿ ಇರಬೇಕು. ಸರ್ಕಾರಿ ಅಧಿಕಾರಿಗಳಿಗಾದರೆ ನೇಮಕಗೊಳಿಸಿದವರು ಅನುಮತಿ ನೀಡಬಹುದು. ರಾಜ್ಯಪಾಲರಿಗೆ ಅನುಮತಿ ನೀಡುವ ಅಧಿಕಾರ ಇಲ್ಲ.
ಈ ರೀತಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಬಾರದು. ಹೇಗೆ ಮಾಡಿದರೆ ರಾಷ್ಟ್ರದಲ್ಲಿ ಅರಾಜಕತೆ ಉಂಟಾಗಲಿದೆ ಎಂದು ಕಪಿಲ್ ಸಿಬಲ್ ವಾದಿಸಿದರು.ಸಿಬಿಐ ತನಿಖೆಯ ಬಗ್ಗೆ ಜನವರಿಯಲ್ಲಿ ವಿಚಾರಣೆ ನಡೆಯಲಿ. ವಿಭಾಗೀಯ ಪೀಠದ ವಿಚಾರಣೆ ನಂತರ ಅಲ್ಲಿ ವಿಚಾರಣೆ ನಡೆಯಲಿ. ಹೀಗೆ ಮಾಡಿದರೆ ಆಕಾಶವೇನು ಕಳಚಿ ಬೀಳುವುದಿಲ್ಲ ಹಾಗಾಗಿ ಜನವರಿ 13 ರಂದು ವಿಚಾರಣೆ ಮುಂದೂಡಿ ಎಂದು ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ ಮನವಿ ಮಾಡಿದರು.ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎನ್.ವಿ ಆಂಜಾರಿಯವರು ವಿಚಾರಣೆಯನ್ನು ಮುಂದಿನ ತಿಂಗಳು ಜನವರಿ 25 ಕ್ಕೆ ಮುಂದೂಡಿ ಆದೇಶ ಹೊರಡಿಸಿದರು.