ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠ ಜನವರಿ 25 ಕ್ಕೆ ಮುಂದೂಡಿದೆ.
ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಆರಂಭವಾದ ವೇಳೆ ಮೇಲ್ಮನವಿಯಲ್ಲಿ ನೋಟಿಸ್ ಇನ್ನೂ ಜಾರಿಯಲಿಲ್ಲ. ಮೊದಲು ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು.
ಇದೆ ಸಂದರ್ಭದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರ ವಕೀಲರು, ಹೈಕೋರ್ಟ್ ಏಕ ಸದಸ್ಯ ಪೀಠ ಕೇವಲ ನೋಟಿಸ್ ಜಾರಿಗೊಳಿಸಿದೆ. ಅಲ್ಲಿನ ವಿಚಾರಣೆಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ ಜಿ ರಾಘವನ್ ವಾದಿಸಿದರು. ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು 2025 ರ ಜನವರಿ 25ಕ್ಕೆ ನಿಗದಿ ಮಾಡಿ ಆದೇಶ ಹೊರಡಿಸಿದೆ.