ಮೈಸೂರು : ಮುಡಾದಲ್ಲಿ ನಡೆದ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ಪ್ರಕರಣದ A1 ಆರೋಪಿಯಾಗಿರುವಂತಹ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಹೌದು ಮುಡಾದಲ್ಲಿ ನಡೆದ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ.ನವೆಂಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಲಾಗಿದೆ.
ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಕಳೆದ 40ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯರ ಮೊದಲ ವಿಚಾರಣೆ ಇದಾಗಿದೆ. ನವೆಂಬರ್ 6ರಂದು ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಬೇಕು ಎಂದು ಲೋಕಾಯುಕ್ತ ಅಧಿಕಾರಿಗಳು ಸೂಚಿಸಿದ್ದಾರೆ.
ಈಗಾಗಲೇ ಲೋಕಾಯುಕ್ತ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ A2 ಪಾರ್ವತಿ, A3 ಮಲ್ಲಿಕಾರ್ಜುನ್ A4 ದೇವರಾಜು ಸೇರಿದಂತೆ ಅಧಿಕಾರಿಗಳು ಹಲವರ ವಿಚಾರಣೆ ನಡೆಸಿದ್ದರು. ಇದೀಗ ನವೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನಲ್ಲಿ ಸೂಚನೆ ನೀಡಿದ್ದಾರೆ.