ಮೈಸೂರು : ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಇದೀಗ ವಿಚಾರಣೆ ಅಂತ್ಯವಾಗಿದೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಸಾಮಾನ್ಯರಂತೆ ಲೋಕಾಯುಕ್ತ ಎಸ್ ಪಿ ಉದೇಶ್ ಅವರು ವಿಚಾರಣೆ ನಡೆಸುತ್ತಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.ಇಂದು ವಿಚಾರಣೆ ಅಂತ್ಯವಾಗಿದ್ದು,ಲೋಕಾಯುಕ್ತ ಕಚೇರಿಯಿಂದ ಅತಿಥಿ ಗೃಹಕ್ಕೆ ತೆರಳಿದ್ದಾರೆ.
ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.