ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯಕ್ತ ಪೊಲೀಸರು ಹೈಕೋರ್ಟ್ ಗೆ ಇಂದು ತನಿಖೆಯ ವರದಿ ಸಲ್ಲಿಕೆ ಮಾಡಿದ್ದಾರೆ.
ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯಕ್ತ ಪೊಲೀಸರು ಇದುವರೆಗೆ ನಡೆಸಿದ ತನಿಖೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.
ಮುಡಾ ಹಗರಣ ಸಂಬಂಧ ಲೋಕಾಯುಕ್ತ ಪೊಲೀಸರು ಎಲ್ಲಾ ತನಿಖೆ ಮುಗಿಸಿದ್ದು, ಇದೀಗ ಮುಚ್ಚಿದ ಲಕೋಟೆಯಲ್ಲಿ ಲೋಕಾಯುಕ್ತ ಪೊಲೀಸರು ತನಿಖಾ ವರದಿ ಸಲ್ಲಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ನೇತೃತ್ವದ ತಂಡ ಮೂರು ತಿಂಗಳಿಂದ ಮುಡಾ ಪ್ರಕರಣ ಸಂಬಂಧ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳ ವಿಚಾರಣೆ ನಡೆಸಿದೆ. ಮುಡಾ ಕಚೇರಿಯಲ್ಲಿನ ಸಂಬಂಧಿತ ದಾಖಲೆ, ಸಾಮಾನ್ಯ ಸಭೆ ನಡಾವಳಿ ಪರಿಶೀಲಿಸಿ ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖಾ ವರದಿ ಸಿದ್ದಪಡಿಸಿ ಹೈಕೋರ್ಟ್ ಗೆ ಸಲ್ಲಿಸಿದೆ.