ಬೆಂಗಳೂರು : ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ ಹಿನ್ನೆಲೆಯಲ್ಲಿ ಅಂತಿಮ ವರದಿ ಸಲ್ಲಿಸಲು ಇದೀಗ ಲೋಕಾಯುಕ್ತ ಪೊಲೀಸರು ಸಿದ್ಧತೆ ಆರಂಭಿಸಿದ್ದಾರೆ. ಇಂದು ಹೈಕೋರ್ಟ್ ನಲ್ಲಿ ಪ್ರಕರಣದ ಕುರಿತು ವಿಚಾರಣೆ ವೇಳೆ ಹೈಕೋರ್ಟಿಗೆ ಸಲ್ಲಿಸಿದ ತನಿಖಾ ವರದಿ ಮರಳಿಸುವಂತೆ ಲೋಕಾಯುಕ್ತ ಪರ ವಕೀಲ ವೆಂಕಟೇಶ ಅರಬಟ್ಟಿ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದರು.
ಹೈಕೋರ್ಟ್ ಗೆ ಸಲ್ಲಿಸಿದ ತನಿಖಾ ವರದಿ ಮರಳಿಸುವಂತೆ ಮನವಿ ಮಾಡಲಾಗಿದ್ದು, ಲೋಕಾಯುಕ್ತ ಪರ ವಕೀಲ ವೆಂಕಟೇಶ್ ಅರಬಟ್ಟಿ ಮನವಿ ಮಾಡಿದ್ದಾರೆ.ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟಿಗೆ ಸಲ್ಲಿಸಲಾಗಿತ್ತು. ಈ ವೇಳೆ ತನಿಖಾ ವರದಿ ಯಾರ ಕೈಗೆ ನೀಡಬೇಕೆಂದು ಈ ವೇಳೆ ಹೈಕೋರ್ಟ್ ಪ್ರಶ್ನಿಸಿದೆ. ಹಾಜರಿರುವ ಲೋಕಾಯುಕ್ತ ಇನ್ಸ್ಪೆಕ್ಟರ್ ಗೆ ಮರಳಿಸುವಂತೆ ವಕೀಲ ವೆಂಕಟೇಶ್ ಅರಬಟ್ಟಿ ಮನವಿ ಮಾಡಿದರು.
ಈ ವೇಳೆ ಭೋಜನ ವಿರಾಮದ ವೇಳೆ ಕಚೇರಿಗೆ ಬಂದು ಪಡೆದುಕೊಳ್ಳಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಸೂಚನೆ ನೀಡಿದರು. ಈ ವೇಳೆ ಕ್ಯಾಪ್ ಹಾಕಿ ಬಂದಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಗೆ ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡರು. ಚಿತ್ರಮಂದಿರಕ್ಕೆ ಬಂದಿದ್ದೀರಾ ಅಥವಾ ಕೋಟಿಗೆ ಬಂದಿದ್ದೀರಾ ಎಂದು ಲೋಕಾಯುಕ್ತ ಇನ್ಸ್ಪೆಕ್ಟರಿಗೆ ತರಾಟೆ ತೆಗೆದುಕೊಂಡರು.