BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ

ಮೈಸೂರು : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಧಿಕಾರಿಗಳು ಇದುವರೆಗೂ ನಡೆಸಿದ ತನಿಖೆ ಕುರಿತಂತೆ ಸಮಗ್ರ ವರದಿಯನ್ನು ತಯಾರಿಸಿದ್ದು ಇದೀಗ ಮೈಸೂರು ಲೋಕಾಯುಕ್ತ ಎಸ್.ಪಿ ಟಿ ಉದೇಶರವರು, ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ಹೌದು ಮುಡಾ ಹಗರಣ ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಕೆಯಾಗಿದ್ದು, ಐಜಿಪಿ ಸುಬ್ರಮಣ್ಯೇಶ್ವರ ರಾವ್ ಗೆ ಮುಡಾ ಹಗರಣದ ಅಂತಿಮ ತನಿಖಾ ವರದಿಯನ್ನು ಸಲ್ಲಿಸಲಾಗಿದೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ ರವರು ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ.