ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಅಕ್ರಮ ಎಸಗಿದವರಿಗೆ ಇಡಿ ಅಧಿಕಾರಿಗಳು ಚುರುಕು ಮುಟ್ಟಿಸುತ್ತಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿತ್ತು.
ಇದೀಗ ಇಡಿ ಹಿಟ್ ಲಿಸ್ಟ್ ನಲ್ಲಿ 20ಕ್ಕೂ ಹೆಚ್ಚು ಜನಪ್ರತಿನಿಧಿಗಳು ಹಾಗೂ ಉದ್ಯಮಿಗಳ ಹೆಸರು ಇದೆ ಎನ್ನಲಾಗಿದೆ. ಅಲ್ಲದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟಂತಹ ಬೆಂಗಳೂರಿನ ಜೆಪಿ ನಗರದಲ್ಲಿರುವ ಬಿಲ್ಡರ್ ಮಂಜುನಾಥ್ ನಿವಾಸದ ಮೇಲು ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೇ ನಡೆಸಿದ್ದರು. ಅದಾದ ಬಳಿಕ ಇನ್ನೊಬ್ಬ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ ನಿವಾಸದ ಮೇಲು ಇಡೀ ಅಧಿಕಾರಿಗಳು ದಾಳಿ ಮಾಡಿದ್ದರು.
ನಿನ್ನೆ ಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕ ಕೂಡಲೇ ವಾಕಿಂಗ್ ಗೆ ಹೋಗಿದ್ದ ದಿನೇಶ್ ಕುಮಾರ್ ಅಲ್ಲಿಂದಲೇ ಪರಾರಿಯಾಗಿದ್ದಾರೆ. ಹಾಗಾಗಿ ಇಂದು ಈಡೇ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ದಿನೇಶ್ ಕುಮಾರ್ ಅವರ ಮನೆಗೆ ನೋಟಿಸ್ ಅಂಟಿಸಲಾಗಿದ್ದು ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ವಾರೆಂಟ್ ಪಡೆದು ಬಂಧಿಸಲಾಗುತ್ತದೆ ಎಂದು ಕೂಡ ಎಚ್ಚರಿಕೆ ನೀಡಿದ್ದಾರೆ.