ಮೈಸೂರು : ಮುಡಾ ಹಗರಣ ಸಂಬಂಧ ಇಡಿ ಅಧಿಕಾರಿಗಳು ಮತ್ತೊಂದು ದಾಳಿ ನಡೆಸಿದ್ದು, ಮೈಸೂರಿನ ಬಿಲ್ಡರ್ ಜಯರಾಮ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಮೈಸೂರಿನ ಶ್ರೀರಾಂಪುರದಲ್ಲಿ ಬಿಲ್ಡರ್ ಜಯರಾಮ್ ನಿವಾಸ ಹಾಗೂ ಕಚೇರಿಗಳ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಮುಡಾ ಹಗರಣದಲ್ಲಿ ಸೈಟ್ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಿಲ್ಡರ್ ಗಳ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದು, ಇದೀಗ ಮೈಸೂರಿನ ಬಿಲ್ಡರ್ ಜಯರಾಮ್ ಮನೆಯ ಮೇಲೂ ದಾಳಿ ನಡೆಸಲಾಗಿದೆ.