ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾನು ಮೊದಲು ಹೈಕೋರ್ಟ್ ತೀರ್ಪು ಏನಿದೆ ಎಂದು ತಿಳಿದುಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ಮೇಲೆ, ಕುಟುಂಬದ ಮೇಲೆ ದೊಡ್ಡ ಷಡ್ಯಂತ್ರ ಮಾಡಿದ್ದಾರೆ. ಯಾವುದೇ ತನಿಖೆ ಮಾಡಿದ್ರೂ ಸಿಎಂ ಸಿದ್ದರಾಮಯ್ಯ ಕ್ಲೀನ್ ಆಗಿ ಹೊರಬರ್ತಾರೆ. ಅವರು ಮಾಡಿರುವ ಕಾರ್ಯಕ್ರಮ, ಕೊಡುಗೆ ಬಿಜೆಪಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.
ಕೋರ್ಟ್ ಆದೇಶದ ಪ್ರತಿ ನೋಡಿ ನಾನು ಪ್ರತಿಕ್ರಿಯೆ ನೀಡುತ್ತೇನೆ. ಸಿಎಂ ಹಾಗೂ ಅವರ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಇದರಿಂದ ಹೊರಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.