ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಪವರ್ ಫೈಟ್ ಗೆ ತೆರೆ ಎಳೆಯಲು ಹೈಕಮಾಂಡ್ ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 15ರ ಒಳಗೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಮತ್ತು ಕರೆದು ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಚರ್ಚೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೌದು ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೇ ವಿಚಾರ ಕುರಿತು ಭಾರಿ ಚರ್ಚೆ ನಡೆಯುತ್ತಿತ್ತು. ಇದೀಗ ಮೇ 15ರ ಆಸುಪಾಸಿನಲ್ಲಿ ಹೈಕಮಾಂಡ್ ಚರ್ಚೆ ನಡೆಸುವ ಸಾಧ್ಯತೆ ಇದೆ. ಮೇ 10ರೊಳಗಾಗಿ ಕೇರಳ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಮುಗಿಸಲು ತೀರ್ಮಾನಿಸಿದ್ದು. ಮೇ 15ರ ಆಸುಪಾಸಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆದು ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚಿಸಲಿದ್ದಾರೆ ಎಂದು ಇದೀಗ ಬಲ್ಲಮೂಲಗಳಿಂದ ತಿಳಿದುಬಂದಿದೆ.








