ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನವೆಂಬರ್ 17 ರಿಂದ ಎರಡು ದಿನ ಪರಿಷೆ ನಡೆಯಲಿದೆ.
ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ ಆಗಿದೆ. ನವೆಂಬರ್ 17 ಮತ್ತು 18ರಂದು ಎರಡು ದಿನಗಳ ಕಾಲ ಪರಿಷೆ ನಡೆಯಲಿದೆ.
ಬಸವನಗುಡಿಯ ದೊಡ್ಡಗಣಪತಿ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಐತಿಹಾಸಿಕ ಹಿನ್ನೆಲೆ ಇದ್ದು, ಪ್ರತಿ ವರ್ಷದಂತೆ ಈ ವರ್ಷವು ಯಾವುದೇ ಅಹಿತಕರ ಘಟನೆ ಆಗದಂತೆ ಅದ್ಧೂರಿ ಆಗಿ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಲಾಗಿದೆ.