ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ ಮಾಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶಿಸಿದ್ದಾರೆ.
ಧರ್ಮಸ್ಥಳದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದರು. ಇಂದು ಸದನದಲ್ಲಿ ತಿಮ್ಮರೋಡಿ ಹೇಳಿಕೆ ಬಗ್ಗೆ ಚರ್ಚೆ ನಡೆಸಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ದೂರು ದಾಖಲಿಸುವಂತೆ ಪೊಲೀಸರಿಗೆ ಅದೇಶಿಸಿದ್ದಾರೆ.