ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಭೀಕರವಾದಂತಹ ಕೊಲೆಯಾಗಿದ್ದು, ಪ್ರೇಮಿಗಳಿಬ್ಬರು ಪ್ರವಾಸಕ್ಕೆ ಎಂದು ಚಿಕ್ಕಮಂಗಳೂರಿಗೆ ಬಂದಿದ್ದರು.ಈ ವೇಳೆ ಯುವಕ ಪ್ರೇಯಸಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಬಂದಿದ್ದ ಯುವಕ, ಯವತಿಯನ್ನು ಕಾರಿನಲ್ಲೇ ಸಾಯಿಸಿ ನಂತರ ಕಾಫಿತೋಟವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಮಗಳೂರಿನ ಪೂರ್ಣಿಮಳನ್ನು ಭದ್ರಾವತಿಯ ಮಧು ಎಂಬ ಪ್ರಿಯಕರ ಕೊಲೆಗೈದು ಆತ್ಮಹತ್ಯೆಗೆ ಶರಣಾಗಿದ್ದಾನೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.