ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳ ರಚನೆ ಮಾಡಲಾಗಿದೆ. ಇದೀಗ ದೂರುದಾರ ಸ್ನೇಹಮಯಿ ಕೃಷ್ಣ ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಶಿಕ್ಷಣ ಕೊಡಿಸುವವರೆಗೂ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಆರಂಭವಷ್ಟೇ ಅಂತ್ಯವಲ್ಲ. ಇಂದು ಲೋಕಾಯುಕ್ತ ಕಚೇರಿಗೆ ಮನವಿ ನೀಡಲು ಆಗಮಿಸಿದ್ದೇನೆ. ತನಿಖೆಯ ಕುರಿತು ಲೋಕಾಯುಕ್ತ ಕಚೇರಿಗೆ ಮನವಿ ನೀಡಲು ಬಂದಿದ್ದೆ. ಯಾವುದೇ ಕೇಸ್ ದಾಖಲಿಸಿದರು ಫಾಲೋ ಅಪ್ ಮಾಡುತ್ತೇನೆ ತನಿಖೆಗೆ ಸಹಕಾರಿ ಆಗುವ ಅಂಶ ಪತ್ರದಲ್ಲಿ ದಾಖಲಿಸಿದ್ದೇನೆ ಎಂದರು.
ನನಗೆ ಈಗಲೂ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಇಡಿಗೆ ಇಂದು ನೇರವಾಗಿ ದೂರನ್ನು ನೀಡಲಾಗಿದೆ. ಸಿಬಿಐ ಇಡಿ ತನಿಖೆಯಿಂದ ಮಾತ್ರ ನ್ಯಾಯ ಸಿಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟವರಿಗೆ ಶಿಕ್ಷೆ ಕೊಡಿಸುವವರೆಗೂ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದರು.