ಮೈಸೂರು : ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸೋತಿರುವ ಹಿನ್ನೆಲೆಯಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳನ್ನು ಗೆಲುವ ಗುರಿ ಹೊಂದಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಷಾ ಭೇಟಿ ನೀಡಿದ್ದಾರೆ.
ಅಮಿತ್ ಶಾ ಅವರು ಇಂದು ಮೈಸೂರು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಮೈಸೂರು ಕಾಂಗ್ರೆಸ್ ಘಟಕದಿಂದ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ ಮೈಸೂರು ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ನೇತೃತ್ವದಲ್ಲಿ “ನನ್ನ ತೆರಿಗೆ ನನ್ನ ಹಕ್ಕು” ಘೋಷಣೆಯೊಂದಿಗೆ “ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರಾ?” ಎಂಬ ಪ್ರಶ್ನೆಯೊಂದಿಗೆ ಪೋಸ್ಟರ್ ಅಭಿಯಾನ ನಡೆಸಲು ಕಾರ್ಯಕರ್ತರು ಸಜ್ಜಾಗಿದ್ದಾರೆ.
ಬೆಳಗ್ಗೆ 11 ಗಂಟೆಗೆ ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಅಮಿತ್ ಶಾ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಲು ಜಿಲ್ಲಾ ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಇಷ್ಟೆಲ್ಲಾ ಆದರೂ ಅಮಿತ್ ಶಾ ಅವರನ್ನು ಕೈ ಪಡೆ ಸ್ವಾಗತ ಕೋರಿದ್ದು, ಕನ್ನಡ ನಾಡಲ್ಲಿ ಅತಿಥ್ಯಕ್ಕೆ ಬರವಿಲ್ಲ. ದ್ರೋಹಿಗಳನ್ನು ಕ್ಷಮಿಸು ಮರೆವಿಲ್ಲ ಅಂತಾ ಘೋಷ ವಾಕ್ಯ ಸಿದ್ಧಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.