ಮೈಸೂರು : ಮೈಸೂರಿನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರಿಂದ ಉದಯನಗರ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣ ನಡೆದಿತ್ತು ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಗೆ ಮೈಸೂರಿನ ನ್ಯಾಯಾಲಯ ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಹೌದು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಲಾಗಿದೆ. ಆರೋಪಿಗೆ 1 ದಿನದ ಅವಧಿಗೆ ಪೊಲೀಸ್ ಕಸ್ಟಡಿಗೆ ನೀಡಿ ಮೈಸೂರಿನ ನ್ಯಾಯಾಲಯವು ಆದೇಶ ಹೊರಡಿಸಿಗಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಪೊಲೀಸರು 20 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಅದರಲ್ಲಿ ಓರ್ವ ಅಪ್ರಾಪ್ತ ಬಾಲಕ ಕೂಡ ಇದ್ದಾನೆ ಎಂದು ತಿಳಿದುಬಂದಿದೆ.