ಬೆಂಗಳೂರು : ಮೈಸೂರು ರಾಜಮನೆತನಕ್ಕೆ 3,011 ಕೋಟಿ ರೂ. TDR ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಟಿಡಿಆರ್ ಬಳಕೆಗೆ ತಡೆ, ಯಾರಿಗೂ ಮಾರಾಟ ಮಾಡುವಂತಿಲ್ಲ ಎಂದು ನ್ಯಾ.ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ. ಆಗಸ್ಟ್ 18ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.