ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ಹೌದು, ರಾಯಚೂರಿನ ಮಾನ್ವಿ ಸೇರಿದಂತೆ ಹಲವು ಕಡೆ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿವೆ ಕಾಗೆ, ಪಾರಿವಾಳ ಸೇರಿದಂತೆ ಹಲವು ಪಕ್ಷಿಗಳು ಸಾವನ್ನಪ್ಪಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಎದುರಾಗಿದೆ.
ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ರಾಯಚೂರಿನ ಜನರಲ್ಲಿ ಹಕ್ಕಿಜ್ವರದ ಆತಂಕ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ಮಾನ್ವಿ ಪಟ್ಟಣ, ರಬಣಕಲ್ ಸೇರಿ ಹಲವೆಡೆ ಪಕ್ಷಿಗಳು ಸಾಯುತ್ತಿವೆ. ಪಕ್ಷಿಗಳ ಸಾವಿಗೆ ಕಾರಣ ತಿಳಿಯದಿರುವುದರಿಂದ ಸಾರ್ವಜನಿಕರಲ್ಲಿ ಹಕ್ಕಿ ಜ್ವರದ ಆತಂಕ ಶುರುವಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲ್ಯಾಬ್ ವರದಿ ಬಂದ ಬಳಿಕ ಪಕ್ಷಿಗಳ ಸಾವಿಗೆ ಕಾರಣ ತಿಳಿದು ಬರಲಿದೆ.