ಬೆಂಗಳೂರು : ಬೆಂಗಳೂರಿನ ಚಿನ್ನಯ್ಯಪಾಳ್ಯದಲ್ಲಿ ನಡೆದ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದ್ದು, ದುರ್ಘಟನೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವಘಡದಲ್ಲಿ ಮೃತಪಟ್ಟ ಬಾಲಕ ಮುಬಾರಕ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ವಿಲ್ಸನ್ ಗಾರ್ಡ್ ಬಳಿಯಲ್ಲಿ ನಿಗೂಢ ಸ್ಪೋಟ ಉಂಟಾಗಿದೆ. ಈ ಸ್ಫೋಟದಲ್ಲಿ ಮೂರು ಮನೆಗಳು ಛಿದ್ರ ಛಿದ್ರವಾಗಿದ್ದಾವೆ. ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 12 ಮಂದಿ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ವಿಷಯ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಲ್ಸನ್ ಗಾರ್ಡನ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಇದ್ದಂತ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
#WATCH | Karnataka CM Siddaramaiah visits the site in Wilson Garden, Bengaluru where a cylinder blast occurred. Around 6 houses damaged in the explosion.
Police have visited the site and are conducting an investigation. The Commissioner of Bengaluru City Police also visited the… pic.twitter.com/F3pp77Mzey
— ANI (@ANI) August 15, 2025