ಹಾಸನ: ಹಾಸನ ಜಿಲ್ಲೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು, ದಂಪತಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡ ಘಟನೆ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ನಡೆದಿದೆ. ಸ್ಫೋಟದಲ್ಲಿ ಗಾಯಗೊಂಡವರು ಮನೆಯ ಮಾಲೀಕ ಮೋಹನ್ ಅವರ ಮಗ ಸುದರ್ಶನ್ ಆಚಾರ್ (40), ಪತ್ನಿ ಕಾವ್ಯ (28) ಮತ್ತು ಅವರ ಮಗು. ಗಾಯಗೊಂಡ ಮೂವರನ್ನೂ ಸ್ಥಳೀಯರಿಂದ ತಕ್ಷಣವೇ ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ತುರ್ತು ಚಿಕಿತ್ಸೆಗೆ ಒಳಪಡಿಸಿದ್ದಾರೆ.
ಸ್ಫೋಟದಿಂದ ಮನೆಗ ಹಾನಿಗೊಳಗಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಉಂಟಾಗಿದೆ. ಆಲೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಕಲೇಶಪುರ ಉಪವಿಭಾಗದ ಡಿ.ವೈ.ಎಸ್.ಪಿ ಪ್ರಮೋದ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







