ಆಂಧ್ರಪ್ರದೇಶ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಸ್ಥಾನ ಗಳಿಸದೆ ಹೋದರು, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಅವರ ಬೆಂಬಲದೊಂದಿಗೆ ನರೇಂದ್ರ ಮೋದಿಯವರು ನಿನ್ನೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.ಇದರ ಬೆನ್ನಲ್ಲೆ ಜೂನ್ 12 ರಂದು ಆಂಧ್ರಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಹೌದು ಜೂನ್ 12 ರಂದು ಆಂಧ್ರದ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಒಂದು ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಅಲ್ಲದೆ ಇನ್ನೊಂದೆಡೆ ಒಡಿಶಾ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ. ಆಂಧ್ರ ಒಡಿಸ್ಸಾ ಸಿಎಂ ಪ್ರಮಾಣ ವಚನ ಕಾರ್ಯಕ್ರಮ ಇವೆರಡು ಜೂನ್ 12 ರಂದು ನಡೆಯಲಿವೆ.