ತಮಿಳುನಾಡು : ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಸ್ವಯಂ ಪ್ರೇರಿತರಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಕೆಳಗಿಳಿದಿದ್ದರಿಂದ ಅಲ್ಲದೇ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಇದೀಗ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರ ನೋಂದಣಿಗೆ ಚುನಾವಣೆ ಘೋಷಣೆಯಾಗಿತ್ತು. ಏಪ್ರಿಲ್ 12ರಂದು ಚುನಾವಣೆ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಬಿಜೆಪಿಯಿಂದ ನೈನಾರ್ ನಾಗೇಂದ್ರನ್ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರನ್ನು ನಾಮನಿರ್ದೇಶನ ಮಾಡಲು ನೈನಾರ್ ನಾಗೇಂದ್ರನ್ ನಾಮಪತ್ರ ಸಲ್ಲಿಸಿದ್ದಾರೆ.
ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದರು. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಅಧಿಕೃತ ಘೋಷಣೆಯನ್ನು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಿಂದ ಮಾಡಲಾಗುವುದು ಎಂದು ತಿಳಿದುಬಂದಿದೆ
ತಿರುನಲ್ವೇಲಿಯ ಪ್ರಮುಖ ತೇವರ್ ಸಮುದಾಯದ ನಾಯಕ ಮತ್ತು ಬಿಜೆಪಿಯ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ಘೋಷಣೆ ಮಾಡುವ ಬಗ್ಗೆ ಬಿಜೆಪಿ ಹೈಕಮಾಂಡ್ ಕೂಡ ಒಲವು ಹೊಂದಿತ್ತು ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಈ ಹುದ್ದೆಗೆ ವನತಿ ಶ್ರೀನಿವಾಸನ್ ಮತ್ತು ತಮಿಳಿಸೈ ಸೌಂದರರಾಜನ್ ಅವರಂತಹ ಹೆಸರುಗಳ ಬಗ್ಗೆ ಊಹಾಪೋಹಗಳಿದ್ದರೂ ಅಂತಿಮವಾಗಿ ನಾಗೇಂದ್ರನ್ ಆಯ್ಕೆಯಾಗಿದ್ದಾರೆ.