ಬಳ್ಳಾರಿ : ಪೋಕ್ಸೋ ಕೇಸ್ ಸಂತ್ರಸ್ತೆ ಹೆಸರು, ವಿವರ ಬಹಿರಂಗಪಡಿಸಿದ್ದಕ್ಕೆ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜವನರಿ 17 ರಂದು ಬಳ್ಳಾರಿಯಲ್ಲಿ ನಡೆದಿದ್ದ ಬಿಜೆಪಿ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ್ದ ಶ್ರೀರಾಮುಲು ಅವರು, ಪೋಕ್ಸೋ ಕೇಸ್ ಸಂತ್ರಸ್ತೆಯ ಹೆಸರು, ವಿವರ ಬಹಿರಂಗಪಡಿಸಿದ್ದರು. ಬಳ್ಳಾರಿ ಗಾಂಜಾ, ಡ್ರಗ್ಸ್ ಹಬ್ ಆಗಿದೆ. ಡ್ರಗ್ ಸೇವಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆಗಿದೆ ಎಂದು ಬಹಿರಂಗವಾಗಿ ಹೇಳಿದ್ದರು.
ಈ ಹಿನ್ನೆಲೆಯಲ್ಲಿ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಾಗಿದೆ.








