ಬೆಂಗಳೂರು : ಕನ್ನಡಿಗರ ಹೋರಾಟಕ್ಕೆ ನಮ್ಮ ಮೆಟ್ರೋ ಮಣಿದಿದ್ದು, ಕನ್ನಡೇತರ ನೇಮಕಾತಿ ಅಧಿಸೂಚನೆ ವಾಪಸ್ ಪಡೆದಿದೆ.
ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಮೆಟ್ರೋ ಸಾರಥಿ ನೇಮಕದಲ್ಲಿ ಕನ್ನಡಿಗರಿಗೇ ಆದ್ಯತೆ, ಬೆಂಗಳೂರು ಮೆಟ್ರೋ ಚಾಲಕರ ಹುದ್ದೆಗೆ ‘ಅನುಭವ ಅಗತ್ಯʼಎಂದು ಹೊರಡಿಸಲಾಗಿದ್ದ ಬಿಎಂಆರ್‌ಸಿಎಲ್ ಅಧಿಸೂಚನೆಯನ್ನು ಹಿಂಪಡೆಯಲು ಹಾಗೂ ಕರ್ನಾಟಕದಲ್ಲಿ ಹುಟ್ಟಿ, ಕನ್ನಡ ಬಲ್ಲ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಅರ್ಹತೆಗಳನ್ನು ತಿದ್ದುಪಡಿ ಮಾಡಲು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದೆ.
ಅದರಂತೆ ಅವರು ಈ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆದಿದ್ದಾರೆ. ಪರಿಷ್ಕೃತ ಅಧಿಸೂಚನೆಯನ್ನು ಶೀಘ್ರವೇ ಪ್ರಕಟಿಸಲಾಗುತ್ತದೆ. ನಾಡು-ನುಡಿ, ಜಲದ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದ್ದಾರೆ.