ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಬೆನ್ನಲ್ಲೇ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ಅವರು ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನವು ರಾಜ್ಯದಲ್ಲಿ ಅದರ ನಾಯಕತ್ವ ಮತ್ತು ಕಾರ್ಯತಂತ್ರದ ಬಗ್ಗೆ ಕಳವಳವನ್ನು ಹೆಚ್ಚಿಸಿದೆ. ಸೋಲಿನ ಹೊಣೆ ಹೊತ್ತು ನಾನಾ ಪಟೋಲೆ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
101 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಕೇವಲ 16 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಹೀನಾಯ ಸೋಲು ಅನುಭವಿಸಿದ್ದು, ಕಾಂಗ್ರೆಸ್ ಭಾರಿ ಮುಖಭಂಗವಾಗಿದೆ. ಸೋಲಿನ ಹೊಣೆ ಹೊತ್ತು ನಾನಾ ಪಟೋಲೆ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.