ಬೆಂಗಳೂರು : ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂ ಹೆಚ್ಚಿಸಿ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯಿತು. ಇದೀಗ ಹಾಲಿನ ದರ ಹೆಚ್ಚಾಳವಾದ ಬೆನ್ನಲ್ಲೆ, ಬೆಂಗಳೂರು ಹೊಟೇಲ್ ಮಾಲೀಕರ ಸಂಘವು ಕಾಫಿ ಮತ್ತು ಟೀ ದರವನ್ನು 2-3 ರೂಪಾಯಿಗಳಷ್ಟು ಹೆಚ್ಚಿಸಲು ನಿರ್ಧರಿಸಿದೆ.
ಹೌದು ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ಅನುಮೋದನೆ ನೀಡಿರುವ ಹಿನ್ನೆಲೆ, ಕಾಫಿ ಮತ್ತು ಟೀಯ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆ ಎದುರಾಗಿದೆ. ಈ ಬಗ್ಗೆ ಬೆಂಗಳೂರು ಹೊಟೇಲ್ ಮಾಲೀಕರ ಸಂಘವು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದು, ಒಂದು ಕಪ್ ಕಾಫಿ ಅಥವಾ ಟೀಯ ದರವನ್ನು 2-3 ರೂಪಾಯಿಗಳಷ್ಟು ಹೆಚ್ಚಿಸುವ ತೀರ್ಮಾನಕ್ಕೆ ಬಂದಿದೆ.
ನಂದಿನಿ ಹಾಲಿನ ದರ ಹೆಚ್ಚಳ ಮಾಡಿ ಆ ದುಡ್ಡನ್ನು ರೈತರಿಗೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ದರ ಏರಿಕೆ ಕುರಿತು ಸ್ಪಷ್ಟನೆ ನೀಡಿದೆ. ಆದರೆ ಜನ ಸಾಮಾನ್ಯರಿಗೆ ಬೆಲೆ ಏರಿಕೆ ಹೊಡೆತ ಬಿದ್ದಿದ್ದು, ಅಲ್ಲದೇ ಇದೀಗ ಕಾಫಿ ಟೀ ಬೆಲೆ ಏರಿಕೆಯಿಂದ ಮತ್ತಷ್ಟು ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.