ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯದಲ್ಲಿ ನಂದಿನ ಹಾಲಿನ ದರವನ್ನು 3 ರೂ. ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ್ದು, ಇಂದು ಮಹತ್ವದ ಸಭೆ ನಡೆಸಲಿದ್ದು, ಹಾಲಿನ ದರ 3 ರೂ. ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಇಂದಿನ ಸಚಿವ ಸಂಪುಟ ಸಭೆ ಬಳಿಕ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಬೇಡಿಕೆ ಸಲ್ಲಿಸಿವೆ. ಪಶು ಆಹಾರ, ಮೇವು, ಕೂಲಿ ಸೇರಿ ಇತರೆ ಖರ್ಚು ಹೆಚ್ಚಾಗಿರುವುದರಿಂದ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡುವಂತೆ ಎಲ್ಲಾ ಹಾಲು ಒಕ್ಕೂಟಗಳಿಂದ ಕೆಎಂಎಫ್ ಅಧ್ಯಕ್ಷರು ಮತ್ತು ಪಶು ಸಂಗೋಪನೆ ಸಚಿವ ವೆಂಕಟೇಶ್ ಅವರಿಗೆ ಒತ್ತಾಯಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಹಾಲಿನ ದರವನ್ನು 3 ರೂ. ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.