ಬೆಂಗಳೂರು : ದರ ಏರಿಕೆಯಿಂದ ಕಂಗಾಲಗಿರುವ ರಾಜ್ಯದ ಜನತೆಗೆ ಇದೀಗ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಕರ್ನಾಟಕ ಹಾಲು ಒಕ್ಕೂಟವು ನಂದಿನಿ ಹಾಲಿನ ದರ ಮತ್ತೆ ಏರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ, ಮತ್ತೆ ಕೆಎಂಎಫ್ ಹಾಲಿನ ದರ ಏರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೌದು ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರೈತರು ಹಾಗೂ ಹಾಲು ಉತ್ಪಾದಕರು ಲೀಟರ್‌ಗೆ 5 ರೂಪಾಯಿ ಏರಿಕೆಗೆ ಒತ್ತಾಯಿಸಿದ್ದಾರೆ. ಕೆಎಂಎಫ್ ಅಧ್ಯಕ್ಷರಾದ ಭೀಮಾ ನಾಯ್ಕ್ ಚಳಿಗಾಲದ ಅಧಿವೇಶನದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ನಂದಿನಿ ಹಾಲಿನ ದರದಲ್ಲಿ ಯಾವುದೇ ದರ ಏರಿಕೆ ಮಾಡೋದಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿಕೆ ನೀಡಿದ್ದರು. ಆದರೆ ಇದೀಗ ಈ ಬಗ್ಗೆ ಚಳಿಗಾಲದ ಅಧಿವೇಶನದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.