ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 4 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳ ಮೂಲದ 7 ಆರೋಪಿಗಳು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದು ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
3 ಕೆಜಿ ಹೈಡ್ರೋಗಾಂಜಾ, 50 ಗ್ರಾಂ MDMA, 500 ಚರಸ್, 500 LSD ಮಾತ್ರೆ, 10 ಕೆಜಿ ಗಾಂಜಾ, ಎರಡು ಕಾರು ಹಾಗೂ 14 ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೇರಳ ಮೂಲದ 7 ಜನ ಸೇರಿ 10 ಆರೋಪಿಗಳನ್ನು ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.








