ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.
ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ನಾಳೆ ದೆಹಲಿ ರಾಜ್ ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿದ್ದು, ಇಂದು ದೆಹಲಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಇನ್ನು ದೆಹಲಿಯಲ್ಲಿರುವ ನಿವಾಸದಲ್ಲಿ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಹೊತ್ತೊಯ್ಯುವ ಬಿಯರ್ ಮೇಲೆ ರಾಷ್ಟ್ರಧ್ವಜವನ್ನು ಹೊದಿಸಲಾಗಿದೆ.
#WATCH | National flag draped over the bier carrying the mortal remains of former PM Dr Manmohan Singh at his residence in Delhi
(Video source: Congress) pic.twitter.com/6PbxZA5qJ2
— ANI (@ANI) December 27, 2024
ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.