ಬೆಂಗಳೂರು : ಇತ್ತೀಚಿಗೆ ಬೆಂಗಳೂರುನಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಮಗಳ ಮೃತದೇಹ ಸಾಗಿಸಲು ತಂದೆ ಒಬ್ಬರಿಗೆ ಲಂಚ ಕೇಳಿದ ಪ್ರಕರಣ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ರಾಷ್ಟೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ನೀಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಐಜಿಪಿಗೆ ನೋಟಿಸ್ ನೀಡಿದೆ.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಎರಡು ವಾರಗಳಲ್ಲಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಪೂರ್ಣವಾಗಿ ವರದಿ ನೀಡುವಂತೆ ಸೂಚನೆ ನೀಡಿದೆ. ಆಂಬುಲೆನ್ಸ್ ಚಾಲಕ, ಪೊಲೀಸ್ ಸಿಬ್ಬಂದಿ, ಸ್ಮಶಾನದ ಸಿಬ್ಬಂದಿ ಹಾಗು ಸರ್ಕಾರಿ ಅಧಿಕಾರಿಗಳು ಲಂಚ ಪಡೆದ ಬಗ್ಗೆ ಆರೋಪ ಕೇಳಿಬಂದಿತ್ತು. ಲಂಚ ನೀಡಿದ ಬಗ್ಗೆ ಖಾಸಗಿ ಸಂಸ್ಥೆಯ ಮಾಜಿ ಮುಖ್ಯ ಹಣಕಾಸು ಅಧಿಕಾರಿಯಾಗಿದ್ದ ಶಿವಕುಮಾರ್ ಗಂಭೀರವಾಗಿ ಆರೋಪ ಮಾಡಿದ್ದರು.
ಈ ಕುರಿತು ಶಿವಕುಮಾರ್ ರಾಜ್ಯದಲ್ಲಿ ಲಂಚಾವತಾರ ಕಂಡು ಶಾಕ್ ಗೆ ಒಳಗಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಸಹ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಓರ್ವ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಲಾಗಿತ್ತು. ಇದೀಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರ್ಕಾರಕ್ಕೆ 2 ವಾರಗಳಲ್ಲಿ ಪ್ರಕರಣದ ಕುರಿತು ವರದಿ ನೀಡುವಂತೆ ನೋಟಿಸ್ ಜಾರಿ ಮಾಡಿದೆ.









