ನವದೆಹಲಿ: ನಯಾಬ್ ಸೈನಿ ಹರಿಯಾಣದ ಹೊಸ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ರಾಜ್ಯದಲ್ಲಿ ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವಿನ ಮೈತ್ರಿ ಮುರಿದು ಬೀಳುವ ಹಂತವನ್ನು ತಲುಪಿದ್ದರಿಂದ ಮನೋಹರ್ ಲಾಲ್ ಖಟ್ಟರ್ ಅವರು ಇಡೀ ಕ್ಯಾಬಿನೆಟ್ನೊಂದಿಗೆ ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಮನೋಹರ್ ಲಾಲ್ ಖಟ್ಟರ್ ಬದಲಿಗೆ ನಯಾಬ್ ಸಿಂಗ್ ಸೈನಿ ಹರಿಯಾಣದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಮಂಗಳವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.