ನವದೆಹಲಿ: 2026ರ ನೀಟ್-ಯುಜಿ (NEET-UG) ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದೆ.
ಯುನೈಟೆಡ್ ಡಾಕ್ಟರ್ಸ್ ಫ್ರಂಟ್ (UDF) ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸೂಚನೆ ನೀಡಿದೆ. ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಎನ್ಟಿಎ (NTA) ಸಂಸ್ಥೆಯನ್ನು ವಿಸರ್ಜಿಸಬೇಕು ಮತ್ತು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯ ಉಸ್ತುವಾರಿಯಲ್ಲಿ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.
ಎನ್ಟಿಎಗೆ ನ್ಯಾಯಾಲಯದ ತರಾಟೆ
ವಿಚಾರಣೆ ವೇಳೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರ ನೇತೃತ್ವದ ಪೀಠವು, “ಈ ಹಿಂದಿನ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಕಠಿಣ ಸೂಚನೆಗಳನ್ನು ನೀಡಿದ್ದರೂ ಸಹ, ಎನ್ಟಿಎ ಇನ್ನು ಪಾಠ ಕಲಿತಂತಿಲ್ಲ” ಎಂದು ಮೌಖಿಕವಾಗಿ ಬೇಸರ ವ್ಯಕ್ತಪಡಿಸಿತು.
ನಿಗಾ ಸಮಿತಿ ರಚನೆಗೆ ಆದೇಶ
ಕೋರ್ಟ್ನ ಹಿಂದಿನ ನಿರ್ದೇಶನಗಳ ಅನ್ವಯ ರಚಿಸಲಾಗಿದ್ದ ‘ನಿಗಾ ಸಮಿತಿ’ಯ (Monitoring Committee) ಪ್ರಸ್ತುತ ಸ್ಥಿತಿಗತಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಅಫಿಡವಿಟ್ ಸಲ್ಲಿಸುವಂತೆ ಎನ್ಟಿಎ ಸಂಸ್ಥೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ನ್ಯಾಯಾಲಯದ ನಿರ್ದೇಶನಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳಲು, ಕೆ. ರಾಧಾಕೃಷ್ಣನ್ ಅವರನ್ನು ನಿಗಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲು ನಾವು ಆದೇಶಿಸುತ್ತೇವೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂಬರುವ ಗುರುವಾರಕ್ಕೆ ಮುಂದೂಡಲಾಗಿದೆ,” ಎಂದು ಸುಪ್ರೀಂ ಕೋರ್ಟ್ ಪೀಠವು ತಿಳಿಸಿದೆ.
The Supreme Court has issued notices to the Centre and the National Testing Agency (NTA) seeking a response on a batch of pleas, including one by the United Doctors Front (UDF), that have sought the dissolution of the NTA over allegations of paper leak of the NEET-UG 2026… pic.twitter.com/RseU4QtAMp
— ANI (@ANI) May 25, 2026








