ನವದೆಹಲಿ : ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನೀಟ್ ಯುಜಿ (NEET UG) 2026 ರ ಮರುಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು (Admit Cards) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಜೂನ್ 21, 2026 ರಂದು ನಡೆಯಲಿರುವ ಈ ಮರುಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಎನ್ಟಿಎ ಅಧಿಕೃತ ವೆಬ್ಸೈಟ್ನಿಂದ ತಮ್ಮ ಹಾಲ್ ಟಿಕೆಟ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ಮರುಪರೀಕ್ಷೆಯು ಮಧ್ಯಾಹ್ನ 2:00 ಗಂಟೆಯಿಂದ ಸಂಜೆ 5:15 ರವರೆಗೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೀಟ್ ಯುಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ?
ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಕೆಳಗಿನ ಹಂತಗಳನ್ನು ಅನುಸರಿಸಬಹುದು:
ಹಂತ 1: ಮೊದಲು ಅಧಿಕೃತ ವೆಬ್ಸೈಟ್ ಆದ NEET NTA Portal ಗೆ ಭೇಟಿ ನೀಡಿ.
ಹಂತ 2: ಹೋಮ್ ಪೇಜ್ನಲ್ಲಿ ಕಾಣಿಸುವ “Admit Card for NEET (UG) 2026 Re-Examination” ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 3: ನಿಮ್ಮ ಅಪ್ಲಿಕೇಶನ್ ಸಂಖ್ಯೆ (Application Number) ಮತ್ತು ಜನ್ಮ ದಿನಾಂಕ (Date of Birth) ಅಥವಾ ಪಾಸ್ವರ್ಡ್ ಅನ್ನು ನಮೂದಿಸಿ.
ಹಂತ 4: ವಿವರಗಳನ್ನು ಭರ್ತಿ ಮಾಡಿದ ನಂತರ Submit ಬಟನ್ ಕ್ಲಿಕ್ ಮಾಡಿ.
ಹಂತ 5: ಈಗ ನಿಮ್ಮ ಪ್ರವೇಶ ಪತ್ರವು ಪರದೆಯ ಮೇಲೆ ಕಾಣಸಿಗುತ್ತದೆ. ಅದನ್ನು ಡೌನ್ಲೋಡ್ ಮಾಡಿಕೊಂಡು, ಮುಂದಿನ ಬಳಕೆಗಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಗಮನಿಸಿ: ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶ ಪತ್ರದೊಂದಿಗೆ (Admit Card) ಮಾನ್ಯತೆ ಪಡೆದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕಾಗುತ್ತದೆ.
Admit Card for the Re-Examination (21 June 2026) is now live at https://t.co/vupfOoEkmH
Before downloading the admit card, please verify your Bank Account details for refund.
Helpline: 011-40759000 / 011-69227700#NEET2026 #NTA pic.twitter.com/7nuGoOjDCL
— National Testing Agency (@NTA_Exams) June 14, 2026








