ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ನೆಲ್ಲೂರು ಮಠ ವರ್ಸಸ್ ಜಾಮಿಯಾ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಮಂಗಳೂರಿನ ಹನುಮಂತಪ್ಪ ಸರ್ಕಲ್ ಬಳಿ ಇರುವ ಮಸೀದಿ ವಿವಾದಿತ ಸ್ಥಳದ ಸುತ್ತಮುತ್ತಲು ಮಾರ್ಚ್ 10 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಾರ್ಚ್ 10ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ತಹಶೀಲ್ದಾರ್ ಸುಮಂತ್ ಆದೇಶ ಹೊರಡಿಸಿದ್ದಾರೆ. ಕಟ್ಟಡ ನಿರ್ಮಾಣ ತೆರವು ಮಾಡದಂತೆ ತಹಶೀಲ್ದಾರ್ ಸೂಚನೆ ನೀಡಿದ್ದು, ಚಿಕ್ಕಮಂಗಳೂರು ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ ಮಾಡಲಾಗಿದೆ.
ಪ್ರಕರಣ ಹಿನ್ನೆಲೆ ಏನು?
ತಾಲೂಕು ಕಚೇರಿ ಮುಂಭಾಗದ ಬಡಾ ಮಕಾನ್ ಹಾಗೂ ನಲ್ಲೂರು ಮಠದ ಜಾಗದ ಕುರಿತು ಅನೇಕ ವರ್ಷಗಳಿಂದ ವಿವಾದ ನಡೆಯುತ್ತಿದೆ. ಆದರೆ, ಏಕಾಏಕಿ ವಕ್ಫ್ ಮಂಡಳಿ ಅಧಿಕಾರಿಗಳ ಸಮ್ಮುಖದಲ್ಲಿ ಜಾಮೀಯಾ ಮಸೀದಿ ಕಮಿಟಿಯವರು ಬಡಾ ಮಕಾನ್ ಸಮೀಪದ ವಿವಾದಿತ ಸ್ಥಳದಲ್ಲಿದ್ದ ಕಟ್ಟಡಗಳನ್ನು ಜೆಸಿಬಿ ಬಳಸಿ ತೆರವುಗೊಳಿಸಿದ್ದಾರೆ ಎನ್ನಲಾಗಿದೆ.
ತೆರವು ಕಾರ್ಯಾಚರಣೆ ವಿಚಾರ ತಿಳಿಯುತ್ತಿದ್ದಂತೆ ನೆಲ್ಲೂರು ಮಠದವರು ಸ್ಥಳಕ್ಕೆ ಆಗಮಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಡಾ ಮಕಾನ್ ಕಮಿಟಿ ಸದಸ್ಯರು ಮತ್ತು ನಲ್ಲೂರು ಮಠದ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಪೊಲೀಸರು ತೆರವು ಕಾರ್ಯಾಚರಣೆ ನಿಲ್ಲಿಸಿ ಗುಂಪನ್ನು ಚದುರಿಸಿದ್ದಾರೆ ಎಂದು ತಿಳಿದುಬಂದಿದೆ.