ಬೆಳಗಾವಿ : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಅರ್ಹರಿಗೆ ಶೀಘ್ರವೇ ಹೊಸ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಘೋಷಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಅಭಿವೃದ್ಧಿ ಕಾರ್ಯಗಳಿಗೂ ಕೂಡ ಸರ್ಕಾರದ ಬಳಿ ಯಾವುದೇ ಹಣದ ಕೊರತೆ ಇಲ್ಲ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್ ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು.
ಎಪಿಎಲ್ ಕಾರ್ಡಿಗೆ ಮೊದಲು 15 ಕೆಜಿ ಅಕ್ಕಿ ಕೊಡುತ್ತಿದ್ದೆವು. ಅವರು ತೆಗೆದುಕೊಳ್ಳುತ್ತಾ ಇರಲಿಲ್ಲ ಹೀಗಾಗಿ ಅದನ್ನ ನಿಲ್ಲಿಸಿದೆವು ಡಿಮ್ಯಾಂಡ್ ಬಂದರೆ ಮತ್ತೆ ಅಕ್ಕಿ ಕೊಡುತ್ತೇವೆ ಒಂದು ವರ್ಷದಿಂದ ಅಕ್ಕಿ ತೆಗೆದುಕೊಳ್ಳುವವರನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿಕೆ ನೀಡಿದರು.
ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ : 570 ಮಂದಿ ಅರೆಸ್ಟ್
ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 570 ಜನರನ್ನು ಬಂಧಿಸಲಾಗಿದೆ. ಒಟ್ಟು 29,603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಚುಕ್ಕೆ ಗುರುತಿನ ಉತ್ತರಿಸಿದ ಸಚಿವರು,.ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕರ್ತ್ಯವ್ಯದಿಂದ ಬಿಡುಗಡೆಗೊಳಿಸಲಾಗಿದೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆ.ಎಫ್.ಸಿ.ಎಸ್.ಸಿ. ಗೋದಾಮು ಅಮಾನತ್ತುಗೊಳಿಸಲಾಗಿರುತ್ತದೆ.ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ. ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ. ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ.








