ಬೆಂಗಳೂರು : ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ಸಮಗ್ರವಾದ ಸೂಚನೆಗಳನ್ನು ಈಗಾಗಲೇ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 34 ಹೆಚ್ ಪಿಎ 2018, ದಿನಾಂಕ:16.04.2019ರಲ್ಲಿ ಹೊರಡಿಸಲಾಗಿರುತ್ತದೆ.
ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿ ಆಹ್ವಾನಿತರ ಹಾಜರಾಗುವಿಕೆಯನ್ನು ಖಚಿತಪಡಿಸಿಕೊಳ್ಳದೇ ಮುದ್ರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಆಹ್ವಾನಿತರ ಸಂಖ್ಯೆಯು ಹೆಚ್ಚಾಗುತ್ತಿದ್ದು ಶಿಷ್ಟಾಚಾರದನ್ವಯ ಆಸನ ವ್ಯವಸ್ಥೆಯನ್ನು ಏರ್ಪಡಿಸುವಲ್ಲಿ ಗೊಂದಲವಾಗುತ್ತಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಹಾಗೂ ಸರ್ಕಾರಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಸುಗಮವಾಗಿ ಮತ್ತು ಘನತೆಯಿಂದ ನಡೆಸಲು ಅನುವಾಗುವಂತೆ ໖:16.04.20190 ಸುತ್ತೋಲೆಯಲ್ಲಿನ ಮಾರ್ಗಸೂಚಿಗಳನ್ನು ಮಾರ್ಪಡಿಸಿ ಈ ಕೆಳಕಂಡಂತೆ ಹೊಸ ಮಾರ್ಗ ಸೂಚಿಗಳನ್ನು ಅಧಿಸೂಚಿಸಲಾಗಿದೆ.
1. ಸರ್ಕಾರಿ ಕಾರ್ಯಕ್ರಮಗಳನ್ನು ಈ ಕೆಳಕಂಡಂತೆ ವರ್ಗೀಕರಿಸಿದೆ. –
(a) ರಾಜ್ಯ ಮಟ್ಟದ ಕಾರ್ಯಕ್ರಮಗಳು: -ಈ ಕಾರ್ಯಕ್ರಮಗಳು ರಾಜ್ಯ ಸರ್ಕಾರದ ಒಂದು ಇಲಾಖೆಯು ಪ್ರತ್ಯೇಕವಾಗಿ ಅಥವಾ ಇನ್ನೊಂದು ಇಲಾಖೆಯ ಅಂಗಸಂಸ್ಥೆಗಳು / ಸ್ವಯಂ ಸೇವಾ / ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಒಂದು ಜಿಲ್ಲೆಗಿಂತ ಹೆಚ್ಚಿನ ಜಿಲ್ಲೆಗಳಿಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ಆಯೋಜಿಸಲಾಗುತ್ತದೆ.
(b) ಇಲಾಖೆಗಳು ಆಯೋಜಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು: – ಈ ಕಾರ್ಯಕ್ರಮಗಳು ರಾಜ್ಯ ಸರ್ಕಾರದ ಒಂದು ಇಲಾಖೆಯು ಪ್ರತ್ಯೇಕವಾಗಿ ಅಥವಾ ಇನ್ನೊಂದು ಇಲಾಖೆ/ ಅಂಗಸಂಸ್ಥೆಗಳು / ಸ್ವಯಂ ಸೇವಾ / ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಒಂದು ಜಿಲ್ಲೆಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಅಥವಾ ಜಿಲ್ಲೆಯ ಇತರ ಭಾಗದಲ್ಲಿ ಆಯೋಜಿಸಲಾಗುತ್ತದೆ.
(c) ಜಿಲ್ಲಾಡಳಿತವು ಆಯೋಜಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು: – ಈ ಕಾರ್ಯಕ್ರಮಗಳು ಜಿಲ್ಲಾಡಳಿತವು ಆಯಾ ಜಿಲ್ಲೆಗಳ ಯೋಜನೆಗಳಿಗೆ/ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಅಥವಾ ಜಿಲ್ಲೆಯ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ.
(d) ತಾಲ್ಲೂಕು ಮಟ್ಟದ ಕಾರ್ಯಕ್ರಮಗಳು: -ಈ ಕಾರ್ಯಕ್ರಮಗಳು
ಜಿಲ್ಲಾಡಳಿತ ಅಥವಾ ತಾಲ್ಲೂಕು ಆಡಳಿತವು ಒಂದು ತಾಲ್ಲೂಕಿಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ತಾಲ್ಲೂಕಿನ ಕೇಂದ್ರ ಸ್ಥಾನದಲ್ಲಿ ಅಥವಾ ತಾಲ್ಲೂಕಿನ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ.
(e) ರಾಜ್ಯದಲ್ಲಿ ಆಯೋಜಿಸುವ ಕೇಂದ್ರ ಪುರಸ್ಕೃತ/ಪ್ರಾಯೋಜಿತ/ಬೆಂಬಲಿತ ಕಾರ್ಯಕ್ರಮಗಳು: ಈ ಕಾರ್ಯಕ್ರಮಗಳು ರಾಜ್ಯಕ್ಕೆ ಸಂಬಂಧಿಸಿದ ಕೇಂದ್ರ ಪುರಸ್ಕೃತ / ಪ್ರಾಯೋಜಿತ/ಬೆಂಬಲಿತ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ರಾಜ್ಯದ ಸಹಯೋಗದೊಂದಿಗೆ ರಾಜ್ಯದ ಕೇಂದ್ರ ಸ್ಥಾನ ಅಥವಾ ರಾಜ್ಯದ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ.
2. ಮಟ್ಟದಲ್ಲಿ ಆಯೋಜಿಸುವ ಕಾರ್ಯಕ್ರಮಗಳ ಮಾರ್ಗಸೂಚಿಗಳು: –
(a) ಉದ್ಘಾಟನೆ: -ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಈ ಕೆಳಕಂಡ ಗಣ್ಯರು
ಉದ್ಘಾಟಿಸುತ್ತಾರೆ: –
ಮಾನ್ಯ ಮುಖ್ಯ ಮಂತ್ರಿಗಳು / ಮಾನ್ಯ ಉಪ ಮುಖ್ಯ ಮಂತ್ರಿಗಳು / ಸಂಬಂಧಪಟ್ಟ ಇಲಾಖಾ ಸಚಿವರು /ಇಲಾಖಾ ಸಚಿವರು ಸೂಚಿಸುವ ಯಾವುದೇ ಗಣ್ಯರು.
(b) ಅಧ್ಯಕ್ಷತೆ:-
(i) ಮಾನ್ಯ ಮುಖ್ಯ ಮಂತ್ರಿಗಳು / ಉಪ ಮುಖ್ಯ ಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಿದರೆ, ಇಲಾಖಾ ಸಚಿವರು ಅಧ್ಯಕ್ಷತೆ ವಹಿಸುತ್ತಾರೆ.