ಬೆಂಗಳೂರು : ರಾಜ್ಯ ಸಿವಿಲ್ ಸೇವೆಗಳಲ್ಲಿನ ಹೊಸದಾಗಿ ಹುದ್ದೆಗಳ ಅಧಿಸೂಚನೆ ನೇಮಕಾತಿಗಾಗಿ ಹೊರಡಿಸುವುದನ್ನು ತಡೆಹಿಡಿಯುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಉಲ್ಲೇಖಿತ ದಿನಾಂಕ:25.11.2024 ಸುತ್ತೋಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಹೊರಡಿಸಬಾರದೆಂದು ಸೂಚಿಸಲಾಗಿದೆ.
ಅದಾಗ್ಯೂ ಕೆಲವು ನೇಮಕಾತಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಉಲ್ಲಂಘಿಸಿ ನೇರ ನೇಮಕಾತಿ ಮಾಡಲು ಹೊಸ ಧಿಸೂಚನೆಯನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಈ ಹಿನ್ನೆಲೆಯಲ್ಲಿ ದಿನಾಂಕ:25.11.2024ರ ನಂತರ ನೇರ ನೇಮಕಾತಿಗಾಗಿ ಯಾವುದೇ ಹೊಸ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದೆ.
ಮುಂದುವರೆದು, ದಿನಾಂಕ:25.11.2024ರ ಸುತ್ತೋಲೆಯನ್ನು ಉಲ್ಲಂಘಿಸುವ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಯಾಯ ಆಡಳಿತ ಇಲಾಖೆಯ ಕಾರ್ಯದರ್ಶಿಗಳಿಗೆ ಈ ಮೂಲಕ ಸೂಚಿಸಲಾಗಿದೆ. ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.