ಚಿತ್ರದುರ್ಗ : ಚಿತ್ರದುರ್ಗದ ಜಿಲ್ಲಾಸ್ಪತ್ರೆ ಆವರಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಜಿಲ್ಲಾಸ್ಪತ್ರೆ ಸಿಬ್ಬಂದಿ ನವಜಾತ ಶಿಶುವನ್ನು ರಕ್ಷಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆ ವಾರ್ಡ್ ಬಳಿಯ ಪೊದೆಯಲ್ಲಿ ನವಜಾತ ಶಿಶು ಪತ್ತೆಯಾಗಿದ್ದು, ಸಿಸಿಟಿವಿಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಹೊರಹೋದ ದೃಶ್ಯ ಸೆರೆಯಾಗಿದೆ. ವಾಂತಿ ಬೇಧಿ ವಾರ್ಡ್ ಕಡೆಯಿಂದ ಹೊರಹೋಗಿದ್ದಾರೆ.
ರಾತ್ರಿ 9.56ಕ್ಕೆ ಇಬ್ಬರು ಮಗು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಹೆತ್ತ ಕಂದನನ್ನು ಬಿಟ್ಟು ಹೋದ ಕ್ರೂರಿಗಳ ವಿರುದ್ಧ ಜನರು ಹಿಡಿಶಾಪ ಹಾಕಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.