ಚಿತ್ರದುರ್ಗ : ಬೆಂಗಳೂರಿಂದ ಗೋವಾಗೆ ಪ್ರವಾಸ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮ ಬಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿಯಾಗಿದ್ದು 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರಿಂದ ಗೋವಾಗೆ ಪ್ರವಾಸ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಗಾಯಾಳುಗಳು ಬೆಂಗಳೂರಿನ ಯಲಹಂಕದ ನಿವಾಸಿಗಳು. ಸದ್ಯ ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.