ತುಮಕೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ 108 ಆ್ಯಂಬುಲೆನ್ಸ್ ಸೇವೆ ಸಿಗದೇ ರೋಗಿಗಳು ಪರದಾಡುತ್ತಿದ್ದು, ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ʻಹಬ್ಬ ಹರಿದಿನಗಳಲ್ಲಿ ಜನರು ಪ್ಲಾಸ್ಟಿಕ್ ರಹಿತ ಚೀಲಗಳನ್ನು ಮಾತ್ರ ಬಳಸಿʼ: ಮನ್ ಕಿ ಬಾತ್ನಲ್ಲಿ ಪ್ರಧಾನಿ ಮೋದಿ ಮಾತು
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಐಡಿಹಳ್ಳಿ ಗ್ರಾಮದ ಜಯಮ್ಮ ಎಂಬುವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲು 108 ಆ್ಯಂಬುಲೆನ್ಸ್ ಗೆ ಕರೆ ಮಾಡಿದರೂ ಸ್ಪಂದಿಸಿಲ್ಲ. ಬಳಿಕ ಜಯಮ್ಮ ಕುಟುಂಬಸ್ಥರು ಮಧುಗಿರಿ ಟಿಹೆಚ್ ಒಗೆ ಕರೆ ಮಾಡಿದ್ದಾರೆ. ಟಿಹೆಚ್ ಒ ಗೆ ಕರೆ ಮಾಡಿದ 1 ಗಂಟೆಯ ನಂತರ ಐಡಿಹಳ್ಳಿಗೆ ಆ್ಯಂಬುಲೆನ್ಸ್ ಬಂದಿದೆ. ಆದರೆ ಅಷ್ಟರಲ್ಲೇ ಜಯಮ್ಮ ಮೃತಪಟ್ಟಿದ್ದಾರೆ.
BREAKING NEWS : ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ : ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?
ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಂದಿದ್ದರೆ ಜಯಮ್ಮ ಪ್ರಾಣ ಉಳಿಯುತ್ತಿತ್ತು. ಜನಪ್ರತಿನಿಧಿಗಳು, ಜಿಲ್ಲಾಡಳಿತದ ವಿರುದ್ಧ ಜಯಮ್ಮ ಕುಟುಂಬಸ್ಥರು ಹಿಡಿಶಾಪ ಹಾಕುತ್ತಿದ್ದಾರೆ.
ರಾಜ್ಯದಲ್ಲಿ ಹಲವೆಡೆ 108 ಆ್ಯಂಬುಲೆನ್ಸ್ಗಳ ಸೇವೆಯಲ್ಲಿ ಸಮಸ್ಯೆ ಎದುರಾಗಿದೆ. ಕಳೆದ ಎರಡು ದಿನದಿಂದ 108 ಆ್ಯಂಬುಲೆನ್ಸ್ ಸೇವೆಗೆ ಎಷ್ಟೇ ಕರೆ ಮಾಡಿದರೂ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. 10 ಬಾರಿ ಕರೆ ಮಾಡಿದರೆ ಒಮ್ಮೆ ಕರೆ ಸ್ವೀಕರಿಸುತ್ತಾರೆ. ಇದರಿಂದ ತೀರ ಎಮರ್ಜೆನ್ಸಿ ಇರುವ ರೋಗಿಗಳಿಗೆ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವುದು ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.