ಭೋಪಾಲ್: ಮಧ್ಯಪ್ರದೇಶದ ರೇವಾದಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್ ಮತ್ತು ಟ್ರಕ್ ಡಿಕ್ಕಿಯಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶನಿವಾರ ಮುಂಜಾನೆ ರೇವಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಮತ್ತು ಟ್ರಕ್ ಪರಸ್ಪರ ಡಿಕ್ಕಿ ಹೊಡೆದು 14 ಜನರು ಸಾವನ್ನಪ್ಪಿದ್ದಾರೆ. ಬಸ್ ಮತ್ತು ಟ್ರಕ್ ನಡುವೆ ಈ ಡಿಕ್ಕಿ ಎಷ್ಟು ಪ್ರಬಲವಾಗಿದೆ ಎಂದರೆ ಬಸ್ಸಿನಲ್ಲಿದ್ದ 12 ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, 2 ಜನರು ಚಿಕಿತ್ಸೆಯ ವೇಳೆಯಲ್ಲಿ ಸಾವನ್ನಪ್ಪಿದರು ಎನ್ನಲಾಗಿದೆ.
ಬಸ್ನಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಮತ್ತು ಮೃತರಲ್ಲಿ ಹೆಚ್ಚಿನವರು ಉತ್ತರಪ್ರದೇಶ ಮತ್ತು ಬಿಹಾರದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂತಾಪ ವ್ಯಕ್ತಪಡಿಸಿದ್ದಾರೆ. ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿದ್ದು ಈ ಘಟನೆ ನಡೆದಿದೆ ಎನ್ನಲಾಗಿದೆ ಈವರೆಗೆ 14 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ ಎಂದು ಹೇಳಲಾಗುತ್ತಿದೆ. ಈ ಬಸ್ ಹೈದರಾಬಾದ್ ನಿಂದ ಲಖನೌಗೆ ತೆರಳುತ್ತಿತ್ತು ಎನ್ನಲಾಗಿದೆ.