ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 17,092 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, , ಕಳೆದ 24 ಗಂಟೆಯಲ್ಲಿ 17,092 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 29 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525168 ಕ್ಕೆ ಏರಿಕೆಯಾಗಿದೆ

COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 17,092 ಹೊಸ ಪ್ರಕರಣಗಳು, 14,684 ಚೇತರಿಕೆಗಳು ಮತ್ತು 29 ಸಾವುಗಳು ವರದಿಯಾಗಿವೆ.

ಸಕ್ರಿಯ ಪ್ರಕರಣಗಳು 1,09,568

ದೈನಂದಿನ ಪಾಸಿಟಿವಿಟಿ ದರ 4.14%

Share.
Exit mobile version