ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಚಿರತೆ ಇನ್ನೂ ಸೆರೆಯಾಗದ ಹಿನ್ನೆಲೆಯಲ್ಲಿ, ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯ 21 ಶಾಲೆಗಳಿಗೆ ರಜೆ ಮುಂದುವರೆಸಿ ಆದೇಶ ಹೊರಡಿಸಲಾಗಿದೆ.
ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ ಆಗಸ್ಟ್ 30 ರ ಮಂಗಳವಾರವಾದ ಇಂದೂ ಸಹ ಬೆಳಗಾವಿ ನಗರ, ಗ್ರಾಮಾಂತರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿಯ 21 ಸರ್ಕಾರಿ, ಖಾಸಗಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದ್ದು ಆನ್ಲೈನ್ನಲ್ಲಿ ತರಗತಿ ನಡೆಸುವಂತೆ ಶಾಲಾ ಆಡಳಿತ ಮಂಡಳಿಗೆ ಡಿಸಿ ನಿತೇಶ್ ಪಾಟೀಲ್ ಸೂಚನೆ ನೀಡಿದ್ದಾರೆ.