ಬೆಳಗಾವಿ : ಕಳೆದ ಕೆಲ ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದ ಬೆಳಗಾವಿ ಜಿಲ್ಲೆಯ 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಕಾನೂನು ಮತ್ತು ಸುವ್ಯವಸ್ತ ಡಿಸಿಪಿ ರವೀಂದ್ರ ಗಡಾಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾಡಿ ಅವರು 7 ಎಸ್ ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ತಲಾಒಬ್ಬೊಬ್ಬರಿಂದ 50 ಸಾವಿರ ರೂ. ಬಾಂಡ್ ಪಡೆದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಬೆಳಗಾವಿ ಪಿಎಫ್ ಐ ಮಾಜಿ ಜಿಲ್ಲಾಧ್ಯಕ್ಷ ಝಕೀವುಲ್ಲಾ ಫೈಜಿ,ಎಸ್ ಡಿಪಿಐ ಬೆಳಗಾವಿ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಕಡೋಲಿ,ಸಲ್ಲಾವುದ್ದೀನ್ ಖಿಲೆವಾಲೆ, ಬದ್ರುದ್ದೀನ್ ಪಟೇಲ್,ಸಮೀವುಲ್ಲಾ, ಜಹೀರ್ ಘೀವಾಲೆ, ರೆಹಮಾನ್ ಗೆ ಜಾಮೀನು ಮಂಜೂರು ಮಾಡಲಾಗಿದೆ.