ಮುಂಬೈ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ತೆಗೆದಿದ್ದು, ಮಹಾರಾಷ್ಟ್ರ ವಿಧಾನಸಬೇಯಲ್ಲಿ ಗಡಿ ಬಗ್ಗೆ ಸಿಎ ಏಏಕನಾಥ್ ಶಿಂದೆ ನಿಲುವಳಿ ಮಂಡಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಿರ್ಣಯವನ್ನು ಅಂಗೀಕರಿಸಿದ ಕೆಲವು ದಿನಗಳ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಇದನ್ನು ಖಂಡಿಸಿದ್ದಾರೆ ಮತ್ತು ರಾಜ್ಯ ವಿಧಾನಸಭೆಯಲ್ಲಿ ಇದೇ ರೀತಿಯ ನಿರ್ಣಯವನ್ನು ಮಂಡಿಸಿದರು. ಇದನ್ನು ಸಹ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಬೆಳಗಾವಿ, ನಿಪ್ಪಾಣಿ, ಕಾರವಾರದ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಸಿಎಂ ಏಕನಾಥ್ ಶಿಂದೆ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಿದ್ದಾರೆ.
Maharashtra CM Eknath Shinde moves a resolution over Maharashtra-Karnataka border dispute in State Assembly pic.twitter.com/Sher1iGEFn
— ANI (@ANI) December 27, 2022