ಮಾಸ್ಕೋ : ಭಾರತದ ನಾಯಕತ್ವದ ಗಣ್ಯರ ಮೇಲೆ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಗುಂಪಿನ ಸದಸ್ಯನೊಬ್ಬನನ್ನು ತನ್ನ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವಿಸ್ (FSB) ಸೋಮವಾರ ತಿಳಿಸಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ.
“ಮಧ್ಯ ಏಷ್ಯಾ ಪ್ರದೇಶದ ಒಂದು ದೇಶದ ಮೂಲ ನಿವಾಸಿಯಾದ ರಷ್ಯಾದಲ್ಲಿ ನಿಷೇಧಿಸಲಾದ ಇಸ್ಲಾಮಿಕ್ ಸ್ಟೇಟ್ ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಸದಸ್ಯನನ್ನ ರಷ್ಯಾದ ಎಫ್ಎಸ್ಬಿ ಗುರುತಿಸಿ ಬಂಧಿಸಿದೆ, ಅವರು ಭಾರತದ ಆಳುವ ವಲಯಗಳ ಪ್ರತಿನಿಧಿಯೊಬ್ಬರ ವಿರುದ್ಧ ತನ್ನನ್ನು ಸ್ಫೋಟಿಸುವ ಮೂಲಕ ಭಯೋತ್ಪಾದಕ ಕೃತ್ಯವನ್ನು ನಡೆಸಲು ಯೋಜಿಸಿದ್ದಾರೆ” ಎಂದು ಪ್ರಾಧಿಕಾರವು ಹೇಳಿಕೆಯಲ್ಲಿ ತಿಳಿಸಿದೆ.
ಬಂಧಿತನನ್ನು ಟರ್ಕಿಯಲ್ಲಿ ಆತ್ಮಹತ್ಯಾ ಬಾಂಬರ್ ಆಗಿ ಐಎಸ್ ನಾಯಕರೊಬ್ಬರು ನೇಮಕ ಮಾಡಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ವರದಿಯ ಕುರಿಉ ಹೆಚ್ಚಿನ ಮಾಹಿತಿ ಲಬ್ಯವಾಗಬೇಕಿದೆ.
ಅಂದ್ಹಾಗೆ, ಇಸ್ಲಾಮಿಕ್ ಸ್ಟೇಟ್ ಮತ್ತು ಅದರ ಎಲ್ಲಾ ಅಭಿವ್ಯಕ್ತಿಗಳನ್ನು ಭಯೋತ್ಪಾದಕ ಸಂಘಟನೆ ಎಂದು ಅಧಿಸೂಚಿಸಲಾಗಿದೆ ಮತ್ತು ಕೇಂದ್ರ ಸರ್ಕಾರವು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967 ರ ಮೊದಲ ಅನುಸೂಚಿಯಲ್ಲಿ ಸೇರಿಸಲಾಗಿದೆ.
ಗೃಹ ಸಚಿವಾಲಯದ ಪ್ರಕಾರ, ಐಎಸ್ ತನ್ನ ಸಿದ್ಧಾಂತವನ್ನು ಪ್ರಚಾರ ಮಾಡಲು ವಿವಿಧ ಇಂಟರ್ನೆಟ್ ಆಧಾರಿತ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುತ್ತಿದೆ. ಸೈಬರ್ ಸ್ಪೇಸ್ ಅನ್ನು ಸಂಬಂಧಪಟ್ಟ ಏಜೆನ್ಸಿಗಳು ಈ ನಿಟ್ಟಿನಲ್ಲಿ ನಿಕಟವಾಗಿ ಗಮನಿಸುತ್ತಿವೆ ಮತ್ತು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ.