ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಇಸುದನ್ ಗಾಧ್ವಿ ಅವರನ್ನು ಗುಜರಾತ್ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
ಗಾಧ್ವಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಅದರ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರಾಗಿದ್ದಾರೆ ಪ್ರಸ್ತುತ ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದಲ್ಲಿರುವ ರಾಜ್ಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಎಸ್ಎಂಎಸ್, ವಾಟ್ಸಾಪ್, ವಾಯ್ಸ್ ಮೇಲ್ ಮತ್ತು ಇ-ಮೇಲ್ ಮೂಲಕ ಪಕ್ಷವನ್ನು ಸಂಪರ್ಕಿಸುವಂತೆ ಎಎಪಿ ನಾಯಕ ಅಕ್ಟೋಬರ್ 29 ರಂದು ಜನರನ್ನು ಕೋರಿದ್ದರು. ಅದರಂತೆ ಗುಜರಾತ್ ಸಾರ್ವಜನಿಕ ಅಭಿಪ್ರಾಯದ ಆಧಾರದ ಮೇಲೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಾಯಿತು.