ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ (Dhruva Sarja) ಅವರು ಹೆಣ್ಣು ಮಗುವಿಗೆ (Baby Girl) ತಂದೆಯಾಗಿದ್ದಾರೆ. . ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರನ್ನು ಹೆರಿಗೆ ಸಲುವಾಗಿ, ಕೆಆರ್ ರಸ್ತೆಯಲ್ಲಿರೋ ಅಕ್ಷ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಪ್ರೇರಣಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಬಗ್ಗೆ ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಹೆಂಡ್ತಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಸಹಜ ಹೆರಿಯಾಗಿದೆ ಅಂಥ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಬಾಲ್ಯದ ಸ್ನೇಹಿತರಾದ ಧ್ರುವ ಸರ್ಜಾ ಮತ್ತು ಪ್ರೇರಣಾ . ಅವರು ಡಿಸೆಂಬರ್ 2018 ರಲ್ಲಿ ವಿವಾಹವಾದರು.